ಕಸ್ತೂರಿರಂಗನ್ ವರದಿ ಅನುಷ್ಟಾನ ಸಾಧ್ಯವಿಲ್ಲ: ರಾಜ್ಯ ಸರ್ಕಾರ ಪುನರುಚ್ಚಾರ
ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಶುಕ್ರವಾರ ತೀವ್ರವಾಗಿ ವಿರೋಧಿಸಿದೆ.

ಬೆಂಗಳೂರು: ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಶುಕ್ರವಾರ ತೀವ್ರವಾಗಿ ವಿರೋಧಿಸಿದೆ.
ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಕಸ್ತೂರಿ ರಂಗನ್ ವರದಿ ಜಾರಿಯಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದೆ. ಈ ವಿಚಾರದಲ್ಲಿ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಹೇಳಿದ್ದೇವು. ನಮ್ಮ ನಿಲುವನ್ನು ಈಗಾಗಲೇ ಎರಡು ಬಾರಿ ಹೇಳಿದ್ದೇವೆ. ಸಂಪುಟದ ಅನುಮೋದನೆಯಿಂದ ಮೂರನೇ ಬಾರಿಗೆ ಹೀಗೆ ಹೇಳುತ್ತಿರುವುದಾಗಿ ಅವರು ತಿಳಿಸಿದರು.
ರಾಜ್ಯ ಸರ್ಕಾರ ವರದಿ ಒಪ್ಪಿಕೊಂಡು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಗಳಿಂದ ಜನರನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ. ನಾವು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ ಮತ್ತು ಚರ್ಚೆಯ ನಂತರ ಮನವಿಯೊಂದನ್ನು ನೀಡುತ್ತೇವೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದ ನಿರ್ಧಾರವನ್ನು ತಿಳಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಿಂದ ನಿಯೋಗ ದೆಹಲಿಗೆ ಹೋಗಲಿದೆ. ಅದಕ್ಕೂ ಮೊದಲು ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಲು ಬಯಸಿದ್ದೇವೆ. ಇಲ್ಲದಿದ್ದರೆ, ಕೇಂದ್ರದಿಂದ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸುವ ಅವಕಾಶವಿದೆ ಎಂದು ಅವರು ಹೇಳಿದರು.
ವರದಿ ಅನುಷ್ಠಾನಕ್ಕೆ ಮೊದಲಿನಿಂದಲೂ ರಾಜ್ಯ ವಿರೋಧ ವ್ಯಕ್ತಪಡಿಸುತ್ತಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 6 ರಂದು ಐದನೇ ಅಧಿಸೂಚನೆಯನ್ನು ಹೊರಡಿಸಿತು, ಅದು ಈ ಹಿಂದೆ ಹೊರಡಿಸಿದ ಇತರ ನಾಲ್ಕು ಪ್ರಕಟಣೆಗಳಿಗೆ ಹೋಲುತ್ತದೆ. ವರದಿ ಜಾರಿಯಾದರೆ 1,553 ಗ್ರಾಮಗಳ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸೂಕ್ತ ಸಮೀಕ್ಷೆ ನಡೆಸದೆ ವರದಿ ಸಿದ್ಧಪಡಿಸಲಾಗಿದ್ದು, ರಾಜ್ಯದಿಂದ ವ್ಯಕ್ತವಾದ 1,000 ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಪರಿಗಣಿಸಲಾಗಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


