ಸೋನಿಯಾ ಗಾಂಧಿ ಇಡಿ ವಿಚಾರಣೆ: ಮಂಗಳವಾರ ಶಾಂತಿಯುತ ಪ್ರತಿಭಟನೆ- ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು 50 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇದೀಗ ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿದೆ. ಇದು ಅನಗತ್ಯವಾದದದ್ದು ಎಂದು ಅವರು ಹೇಳಿದ್ದಾರೆ.
ವಿಚಾರಣೆ ನೆಪದಲ್ಲಿ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದೆ. ಇಡಿ ತನಿಖೆ ವಿರೋಧಿಸಿ ಜುಲೈ 24 ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು, ಇದರಲ್ಲಿ ಭಾಗವಹಿಸುವಂತೆ ಎಲ್ಲರನ್ನೂ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


