ಹುಬ್ಬಳ್ಳಿ: ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
ಹುಬ್ಬಳ್ಳಿ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಎಲ್ಲರಿಗೂ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಲ್ಲಿ ಆರು ಮಂದಿ ಮಹಿಳೆಯರಾಗಿದ್ದಾರೆ.
ಮಲಿಕ್ರೆಹನ್ ಕೊಪ್ಪದ್ (18), ನಿರ್ಮಲಾ ಹುಚ್ಚಣ್ಣನವರ್ (29), ಗೌರವ್ವ ಹಿರೇಮಠ (45), ಚೆನ್ನವ್ವ ಅರಿಮಲ್ (42), ಪ್ರೇಮಾ ಅರಿಮಲ್ (20), ಮಾಲೇಶ್ ಹದ್ದಣ್ಣನವರ್ (27), ನಾನಿಮಾ ಪದದಾರ (35) ಮತ್ತು ವಿಜಯಲಕ್ಷ್ಮಿ ಯಚ್ಚನಗರ (34) ಗಾಯಗೊಂಡವರು. .
ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಕೂಡಲೇ ಹುಬ್ಬಳ್ಳಿ, ಅಮರಗೋಳ, ಧಾರವಾಡ ಮತ್ತು ಕಲಘಟಗಿಯಿಂದ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಆದರೆ ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಪಾರ್ಕಲ್ ಕ್ಯಾಂಡಲ್ ತಯಾರಿಕೆ ಫ್ಯಾಕ್ಟರಿ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬೂ ರಾಮ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


