ರಾಜ್ಯ

ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿಯಲ್ಲಿ ವಿದ್ಯುತ್ ತಂತಿ ತಗುಲಿ ಎರಡು ಕಾಡಾನೆಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.

ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿಯಲ್ಲಿ ವಿದ್ಯುತ್ ತಂತಿ ತಗುಲಿ ಎರಡು ಕಾಡಾನೆಗಳು ಸಾವು
ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಕಾಡಾನೆಗಳು
Published On :

ಕೊಡಗು: ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.

ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿ ಖಾಸಗಿ ಎಸ್ಟೇಟ್‌ನಲ್ಲಿ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾಸಗಿ ಎಸ್ಟೇಟ್ ಒಳಗೆ ಕಾಡಾನೆಗಳು ಹೇಗೆ ಬಂದವು, ಎಷ್ಟು ಹೊತ್ತಿಗೆ ಬಂದವು ಎಂಬ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ.

ಕೊಡಗು ಜಿಲ್ಲೆಯಲ್ಲಿ ಕೃಷಿ ಭೂಮಿಯಲ್ಲಿ ಅಳವಡಿಸುವ ವಿದ್ಯುತ್ ತಂತಿಗೆ ಸಿಲುಕಿ ಈ ರೀತಿ ಕಾಡಾನೆಗಳು ಸಾಯುತ್ತಿರುವುದು ಇದು ಮೊದಲೇನಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.