ರಾಜ್ಯ

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಸ್ಪೀಕರ್ ಕಾಗೇರಿ

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿಗಾಗಿ ಬಲವಾದ ಬೇಡಿಕೆ ಕೇಳಿಬರುತ್ತಿದೆ. ಸಾಮಾಜಿಕ ಮಾಧ್ಯಮ ಸೇರಿದಂತೆ ಆ ಭಾಗದ ಸಾರ್ವಜನಿಕರು ಹಲವು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಸ್ಪೀಕರ್ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
Published On :

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿಗಾಗಿ ಬಲವಾದ ಬೇಡಿಕೆ ಕೇಳಿಬರುತ್ತಿದೆ. ಸಾಮಾಜಿಕ ಮಾಧ್ಯಮ ಸೇರಿದಂತೆ ಆ ಭಾಗದ ಸಾರ್ವಜನಿಕರು ಹಲವು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರ ಕುರಿತು ಸೋಮವಾರ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇದೆ. ಆಸ್ಪತ್ರೆಗಾಗಿ ನಿತಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಈಗ ಆರೋಗ್ಯ ಸಚಿವ ಸುಧಾಕರ್ ಅವರ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಮತ್ತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಸುಧಾಕರ್ ಕೂಡ ಇದು ವಿಶೇಷ ಪ್ರಕರಣ ಅಂತ ಹೇಳಿದ್ದಾರೆ. ಸಿಎಂ ಜೊತೆ ಚರ್ಚೆ ಮಾಡಿ ಆಸ್ಪತ್ರೆ ಮಂಜೂರು ಮಾಡೋದಾಗಿ ಸುಧಾಕರ್‌ ಹೇಳಿದ್ದಾರೆ ಎಂದರು.

ಅಂತಿಮ ನಿರ್ಣಯ ಸುಧಾಕರ್ ಅವರು ತೆಗೆದುಕೊಳ್ಳಲಿದ್ದಾರೆ ಎಂದ ಕಾಗೇರಿ, ಆಸ್ಪತ್ರೆ ಮಂಜೂರಾತಿಗಾಗಿ ಅಗತ್ಯ ಪ್ರಯತ್ನ ಮಾಡೋದಾಗಿ ಹೇಳಿದ್ದಾರೆ. ಉತ್ತರ ಕನ್ನಡಕ್ಕೆ ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರ್ತೇವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.