ಬಳ್ಳಾರಿ: ಕಲುಷಿತ ನೀರು ಕುಡಿದ ನಂತರ ಬಾಲಕಿ ಸಾವು, 20 ಮಂದಿ ಅಸ್ವಸ್ಥ
ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಕುಲಷಿತ ನೀರು ಕುಡಿದ ನಂತರ ಕೆಲವು ಜನರು ಬೇಧಿ, ವಾಂತಿ ಮತ್ತಿತರ ಲಕ್ಷಣಗಳ ಬಗ್ಗೆ ದೂರು ನೀಡಿದ ಬಳಿಕ ಎರಡು ದಿನಗಳ ನಂತರ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಕಂಪ್ಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸುಕನ್ಯಾ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ.
ಆರೋಗ್ಯಾಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ. ನರಿಹಾಲ ಹೊಳೆ ನೀರು, ಆಹಾರದ ನೀರಿನೊಂದಿಗೆ ಬೆರೆತು ನೀರು ಕಲುಷಿತವಾಗಿರುವುದಾಗಿ ಗೋನಾಳ್ ಗ್ರಾಮಸ್ಥರು ಆರೋಪಿಸಿದ್ದಾರೆ.
ನೀರು ಕಲುಷಿತವಾಗಿರುವಂತೆ ಕಾಣುತ್ತಿದೆ. ಆದರೆ, ಪ್ರಯೋಗಾಲಯದ ಫಲಿತಾಂಶ ಬಂದ ಬಳಿಕವೇ ಅದು ದೃಢವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಎಲ್. ಜನಾರ್ಧನಾ ಹೇಳಿದ್ದಾರೆ. ಕಲುಷಿತ ನೀರಿನಿಂದ ಅಸ್ವಸ್ಥರಾದ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


