ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶ
ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.
ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು, ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


