ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯಲು ಅಧಿಕಾರಿಗಳಿಗೆ ಸೂಚನೆ
ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರು: ತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ.
ಇದು ಕೇವಲ ಶಿಕ್ಷಣ ಇಲಾಖೆ ಮಾತ್ರವಲ್ಲದೇ ತಾಲೂಕು ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗೂ ಅನ್ವಯವಾಗಲಿದೆ.
ದತ್ತು ಸ್ವೀಕರಿಸುವ ಸಂಸ್ಥೆಯ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಆದೇಶದಲ್ಲಿ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ 47,000 ಸರ್ಕಾರಿ ಶಾಲೆಗಳು ಹಾಗೂ 1,200 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿವೆ.
ದತ್ತು ಪಡೆದ ಸಂಸ್ಥೆಗೆ ಅಧಿಕಾರಿಗಳು ತಿಂಗಳಿಗೆ ಒಮ್ಮೆ ಅಥವಾ ಎರಡು ಬಾರಿ ಭೇಟಿ ನೀಡಬೇಕು. ಈ ವೇಳೆ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು ಹಾಗೂ ಸೂಕ್ತ ನಿರ್ದೇಶನಗಳನ್ನು ನೀಡಬೇಕು, ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಬೇಕು, ಅವರ ಆಸಕ್ತಿಗಳನ್ನು ಅರಿಯಬೇಕು ಹಾಗೂ ಜೀವನದಲ್ಲಿ ಗುರಿ ಹೊಂದಲು ಪ್ರೇರೇಪಿಸಬೇಕು ಎಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಇತರ ಉನ್ನತ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳನ್ನು ದತ್ತು ಪಡೆಯುವುದಕ್ಕೆ ಹಂಚಿಕೆ ಮಾಡಲಿದ್ದಾರೆ.
ದತ್ತು ಪಡೆಯಲು ಹಂಚಿಕೆ ಮಾಡಲಿರುವ ಶಾಲೆಗಳ ಪೈಕಿ ಬಹುತೇಕ ಶಾಲೆಗಳು ಗ್ರಾಮೀಣ ಶಾಲೆಗಳಾಗಿರಲಿದ್ದು, ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿರಲಿದ್ದು ಮಾಸಿಕ ವರದಿ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


