ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆ
ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ.

ಬೆಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ.
ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜೀನಾಮೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ಬಿಜೆಪಿಯ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂಥಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡಾ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರ್ ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಹಿಂದೆಲ್ಲಾ ನಡೆದ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚ ಅಧ್ಯಕ್ಷ ಹುದ್ದೆಯಾದಿಯಾಗಿ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಎಲ್ಲರೂ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ರಾಜರಾಜೇಶ್ವರಿ ನಗರ ಮಂಡಲದ ಸಾಮಾಜಿಕ ಜಾಲತಾಣದ ಸಂಚಾಲಕನ ಹುದ್ದೆಗೆ ಶ್ರೀನಿವಾಸ್ ಗೌಡ ಅವರು ರಾಜೀನಾಮೆ ನೀಡಿದ್ದರೆ, ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಅವರೂ ರಾಜೀನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


