ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
ಹಿಂದೂ ಕಾರ್ಯಕರ್ತರ ಹತ್ಯೆಯಾದ ಸಂದರ್ಭದಲ್ಲಿ, ಉಗ್ರ ಚಟುವಟಿಕೆಗಳು ನಡೆದಾಗ ಪಿಎಫ್ಐಯಂತಹ (PFI) ಸಂಘಟನೆಗಳನ್ನು ನಿಷೇಧ ಮಾಡಬೇಕೆಂಬ ಕೂಗು ಹಲವು ಸಮಯಗಳಿಂದ ಕೇಳುತ್ತಾ ಬಂದಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗಲೂ ಇದೇ ರೀತಿಯ ಆಗ್ರಹ ಕೇಳಿಬಂದಿದೆ.

ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಯಾದ ಸಂದರ್ಭದಲ್ಲಿ, ಉಗ್ರ ಚಟುವಟಿಕೆಗಳು ನಡೆದಾಗ ಪಿಎಫ್ಐಯಂತಹ (PFI) ಸಂಘಟನೆಗಳನ್ನು ನಿಷೇಧ ಮಾಡಬೇಕೆಂಬ ಕೂಗು ಹಲವು ಸಮಯಗಳಿಂದ ಕೇಳುತ್ತಾ ಬಂದಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗಲೂ ಇದೇ ರೀತಿಯ ಆಗ್ರಹ ಕೇಳಿಬಂದಿದೆ.
ಈ ಬಗ್ಗೆ ನಿನ್ನೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಉತ್ತರಿಸಿದ ಸಿಎಂ ಬೊಮ್ಮಾಯಿ, ಛತ್ತೀಸ್ ಗಢ ಸರ್ಕಾರ ಈ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಮಾಡಿದ್ದಕ್ಕೆ ಒಂದು ತಿಂಗಳಲ್ಲಿ ಹೈಕೋರ್ಟ್ ನಿಂದ ತಡೆ ಬಂತು. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸೂಕ್ತವಾದ ರೀತಿಯಲ್ಲಿ ನಿಷೇಧವಾಗಬೇಕಿರುವುದರಿಂದ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದುಕೊಂಡು ಮಾಡುತ್ತೇವೆ. ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.
ಬೇರೆ ಬೇರೆ ರಾಜ್ಯಗಳಲ್ಲಿರುವ ಮತ್ತು ಕೇಂದ್ರ ಸರ್ಕಾರದ ಕಾನೂನನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಪರಿಣಿತರ ಅಭಿಪ್ರಾಯ ಪಡೆದು ಸಂಪೂರ್ಣ ಸಶಜ್ಜಿತ ತಂಡವನ್ನು ತಯಾರು ಮಾಡುತ್ತೇವೆ ಎಂದರು.
ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಸುದ್ದಿ ಕೇಳಿದ ಮೇಲೆ ಸಾಕಷ್ಟು ನೋವು, ಕಳವಳ ನನ್ನೊಳಗೆ ಇತ್ತು. ಇಂದು ಸರ್ಕಾರಕ್ಕೆ ಒಂದು ವರ್ಷ ಹಿನ್ನೆಲೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹಾಗಾಗಿ ರದ್ದು ಮಾಡಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


