ರಾಜ್ಯ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!
ಫಾಜಿಲ್ ಹತ್ಯೆ
Published On :

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.

ಸುರತ್ಕಲ್ ನ ಎಸ್ ಕೆ ಮೊಬೈಲ್ ಅಂಗಡಿ ಬಳಿ ಘಟನೆ ನಡೆದಿದೆ. ಮೂವರು ಯುವಕರ ತಂಡ ಫಾಜಿಲ್ ಮಂಗಳಪೇಟೆ ಎಂಬಾತನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ ನನ್ನು ಸ್ಥಳೀಯರು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸೂರತ್ಕಲ್ ನಲ್ಲಿ ಬಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.