ರಾಜ್ಯ

ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ. ಅಶ್ವತ್ಥನಾರಾಯಣ

ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ. ಅಶ್ವತ್ಥನಾರಾಯಣ
ಡಾ ಸಿ ಎನ್ ಅಶ್ವಥ್ ನಾರಾಯಣ
Published On :

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಎಂದರು. 10 ಲಕ್ಷ ರೂಪಾಯಿಗಳ ಚೆಕ್ ನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.

ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು. ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹೀಗೆಯೇ ಹತ್ಯೆಯಾದ ಹರ್ಷನ ಕುಟುಂಬಕ್ಕೂ ಸಚಿವರು ಮಾನವೀಯವಾಗಿ ಸ್ಪಂದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.