ಪ್ರವೀಣ್ ನೆಟ್ಟಾರು ಹಂತಕರ ಬಂಧನಕ್ಕೆ ಕೇರಳ ಪೊಲೀಸರ ನೆರವು, 15 ಜನರನ್ನು ವಶಕ್ಕೆ ಪಡೆದು ವಿಚಾರಣೆ: ಆರಗ ಜ್ಞಾನೇಂದ್ರ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹತ್ಯೆ ಮಾಡಿದವರು ಬೈಕ್ ನಲ್ಲಿ ಬಂದು ಕುಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದ್ದು ಬೈಕ್ ನಲ್ಲಿ ಕೇರಳದ ಕಾಸರಗೋಡಿನ ದಾಖಲಾತಿ ನಂಬರ್ ಇರುವುದರಿಂದ ಕೇರಳ ಪೊಲೀಸರ ಜೊತೆ ಚರ್ಚೆ ನಡೆಸಲಾಗುತ್ತಿದೆ. ಕೇರಳ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದರೆ ಹತ್ಯೆ ಎಸಗಿದವರನ್ನು ಮಟ್ಟ ಹಾಕಲು ಸುಲಭವಾಗುತ್ತದೆ ಎಂದಿದ್ದಾರೆ.
ನಾವು ಅಸಹಾಕರಲ್ಲ, ನಮ್ಮ ಸರ್ಕಾರ ಅಸಹಾಯಕವಾಗಿಲ್ಲ, ನಾವು ಎಲ್ಲಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಆಕ್ರೋಶ ಇದ್ದಿದ್ದಕ್ಕೆ ಅನೇಕ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದಾರೆ. ಅನೇಕ ಮತಾಂಧ ಸಂಘಟನೆಗಳ ಮೇಲೆ ಅನುಮಾನವಿದೆ ಎಂದು ಹೇಳಿದರು.
ಮತಾಂಧ ಸಂಘಟನೆಗಳ ಮೇಲೆ ನಮಗೆ ಅನುಮಾನವಿದೆ, ಹಂತಕರ ಬಂಧನಕ್ಕೆ ಕೇರಳ ಪೊಲೀಸರ ನೆರವು ಕೇಳಿದ್ದೇವೆ, ಕರಾವಳಿಯ ಗಡಿಭಾಗ ಕೇರಳದಿಂದ ಬಂದು ಕೊಲೆಗಡುಕರು ಕುಕೃತ್ಯ ಎಸಗುವ ಘಟನೆ ಹಲವು ಬಾರಿ ನಡೆದಿದೆ. ಜಂಟಿ ಕಾರ್ಯಾಚರಣೆಯಿಂದ ಮಟ್ಟಹಾಕಲು ಸಾಧ್ಯವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ. ಆದರೆ, ಒಂದೇ ಒಂದು ಘಟನೆಯನ್ನು ಆಧರಿಸಿ ನಿಷೇಧಿಸಲು ಸಾಧ್ಯವಿಲ್ಲ. ಇತರ ರಾಜ್ಯಗಳಲ್ಲಿ ಗುಂಪುಗಳನ್ನು ನಿಷೇಧಿಸಿದ್ದರೂ, ನಿಷೇಧದ ವಿರುದ್ಧ ನ್ಯಾಯಾಲಯಗಳಿಂದ ತಡೆ ಬಂದಿದೆ ಎಂದರು.
ತನಿಖೆ ಮುಂದುವರಿದಿದ್ದು, ಹಲವರನ್ನು ಬಂಧಿಸಲಾಗಿದೆ. ನಮಗೆ PFI ಮತ್ತು SDPI ಮೇಲೆ ಅನುಮಾನವಿದೆ. ಆದರೆ ಈಗಲೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಪೊಲೀಸರು ಶೀಘ್ರವೇ ಪತ್ತೆಹಚ್ಚುತ್ತಾರೆ ಎಂದರು.
ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಸೂತಕದ ಛಾಯೆಯಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದು ಸಿಎಂ ಬೊಮ್ಮಾಯಿ ಜನೋತ್ಸವ ಕಾರ್ಯಕ್ರಮ ರದ್ದುಮಾಡುವ ತೀರ್ಮಾನ ಮಾಡಿರುವುದು ಪ್ರಶಂಸನೀಯ ಎಂದು ಕೂಡ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


