ಪಿಎಸ್‌ಐ ನೇಮಕಾತಿ ಹಗರಣ: ಎರಡನೇ ಚಾರ್ಜ್‌ಶೀಟ್‌ನಲ್ಲಿ ಡಿವೈಎಸ್‌ಪಿ ಶಾಂತಕುಮಾರ್ ಹೆಸರು ಉಲ್ಲೇಖ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಅಮಾನತುಗೊಂಡಿರುವ ನೇಮಕಾತಿ ಘಟಕದ ಡಿವೈಎಸ್‌ಪಿ ಶಾಂತಕುಮಾರ್ ಮತ್ತು ಮೂವರು ಪೊಲೀಸ್ ಅಧಿಕಾರಿಗಳು, 14 ಅಭ್ಯರ್ಥಿಗಳು ಮತ್ತು ಏಳು ಮಧ್ಯವರ್ತಿಗಳು ಸೇರಿದಂತೆ 29 ಜನರ ಹೆಸರನ್ನು ಉಲ್ಲೇಖಿಸಲಾಗಿದೆ. ಉತ್ತರ ಪತ್ರಿಕೆಗಳನ್ನು ಇಡಲಾಗಿದ್ದ ಸ್ಟ್ರಾಂಗ್ ರೂಂ ಉಸ್ತುವಾರಿಯನ್ನು ಶಾಂತ ಕುಮಾರ್ ಕುಮಾರ್ ನೋಡಿಕೊಳ್ಳುತ್ತಿದ್ದರು.
ಸಿಐಡಿ ಪ್ರಕಾರ, ಆರೋಪಿ ಅಭ್ಯರ್ಥಿಗಳಿಂದ ದೊಡ್ಡ ಪ್ರಮಾಣದಲ್ಲಿ ಹಣ ಪಡೆದು ಒಎಂಆರ್ ಶೀಟ್‌ಗಳನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ. 3,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಜುಲೈ 4 ರಂದು ಬಂಧಿಸಲಾದ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಉಲ್ಲೇಖಿಸಿಲ್ಲ.
90 ದಿನಗಳ ನಿಗದಿತ ಅವಧಿಯೊಳಗೆ ಆರೋಪಪಟ್ಟಿ ಸಲ್ಲಿಸಲು ಸಿಐಡಿಗೆ 60 ದಿನಗಳಿಗಿಂತ ಹೆಚ್ಚು ಸಮಯವಿದೆ. ಪಾಲ್ ಬೆಂಗಳೂರು ಕೇಂದ್ರ ಕಾರಾಗೃಹ, ಪರಪಣ್ಣ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


