ಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ; ಪೊಲೀಸ್ ಕಾನ್ ಸ್ಟೇಬಲ್ ಬಂಧನ
ತನ್ನ ಮನೆಯಿಂದ ವಿಜಯನಗರಕ್ಕೆ ಹೋಗಿದ್ದ ಬಾಲಕಿ, ಉದ್ಯಾನ ಬಳಿಯ ರಸ್ತೆಯಲ್ಲಿ ಓಡಾಡುತ್ತಿದ್ದಳು. ಮಫ್ತಿಯಲ್ಲಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಬಾಲಕಿಯನ್ನು ಮಾತನಾಡಿಸಿ ಸಹಾಯ ಮಾಡುವುದಾಗಿ ಹೇಳಿ ಬೈಕ್‌ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ.’

ಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪದಡಿ ಕಾನ್‌ಸ್ಟೆಬಲ್ ನನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಈತ ಎಸಗಿದ್ದ ಕೃತ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕೆ.ಪಿ.ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಪೋಷಕರ ಜೊತೆ ವಾಸವಿದ್ದ ಬಾಲಕಿ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದಳು, ಈ ಬಗ್ಗೆ ಆಕೆಯ ಪೋಷಕರು ಠಾಣೆಯಲ್ಲಿ ಪ್ರಕರಣ ಸಹ ದಾಖಲಿಸಿದ್ದರು.
‘ತನ್ನ ಮನೆಯಿಂದ ವಿಜಯನಗರಕ್ಕೆ ಹೋಗಿದ್ದ ಬಾಲಕಿ, ಉದ್ಯಾನ ಬಳಿಯ ರಸ್ತೆಯಲ್ಲಿ ಓಡಾಡುತ್ತಿದ್ದಳು. ಮಫ್ತಿಯಲ್ಲಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಬಾಲಕಿಯನ್ನು ಮಾತನಾಡಿಸಿ ಸಹಾಯ ಮಾಡುವುದಾಗಿ ಹೇಳಿ ಬೈಕ್‌ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ.’
ಕೊಠಡಿಯಲ್ಲಿ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದ ಕಾನ್‌ಸ್ಟೆಬಲ್, ಅತ್ಯಾಚಾರ ಎಸಗಿದ್ದ. ಜುಲೈ 27ರಂದು ಬೆಳಿಗ್ಗೆ ಬಾಲಕಿಯನ್ನು ನಿಲ್ದಾಣಕ್ಕೆ ಕರೆದೊಯ್ದು ಹಣ ನೀಡಿ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸ್ ಅಧಿಕಾರಿ ಪೊಲೀಸ್ ಪೇದೆಯನ್ನು ಗುರುತಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಅವರನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು. ವಿಷಯ ಗೊತ್ತಾಗುತ್ತಿದ್ದಂತೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


