ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.
ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.
ಏನಿದು ವಿವಾದ?: ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು. ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರದಲ್ಲಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮ ಈಜುಕೊಳ ನಿರ್ಮಾಣ ಆರೋಪ, ಪಾರಂಪರಿಕ ಜಿಲ್ಲಾಧಿಕಾರಿ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ವಿಚಾರ ಸೇರಿದಂತೆ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸರ್ಕಾರ ರೋಹಿಣಿ ಸಿಂಧೂರಿಯವರಿಗೆ ಸೂಚನೆ ನೀಡಿದೆ.
ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಕಾರ್ಯದರ್ಶಿ ವಸತಿ ಇಲಾಖೆ ಕಚೇರಿಗೆ ಬರಲು ತಿಳಿಸಲಾಗಿದೆ. ರೋಹಿಣಿ ಸಿಂಧೂರಿ ಬಳಿ ಹೇಳಿಕೆ ಪಡೆದ ನಂತರ ಕಾರ್ಯದರ್ಶಿ ಡಾ.ಜೆ. ರವಿಶಂಕರ್ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


