ಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIA
ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ.

ಭಟ್ಕಳ: ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ.
ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ 30 ವರ್ಷದ ಅಬ್ದುಲ್ ಮುಕ್ತದೀರ್ ಹಾಗೂ ಆತನ ಸಹೋದರನನ್ನು ಎನ್ಐಎ ವಶಕ್ಕೆ ಪಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಯ ಪರ ಲೈಕ್, ಕಾಮೆಂಟ್ ಮಾಡುತ್ತಿದ್ದ ವ್ಯಕ್ತಿ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಅಷ್ಟೇ ಅಲ್ಲದೇ ಐಸಿಸ್ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಆಧಾರದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆ 4 ಗಂಟೆ ವೇಳೆಗೆ ಈ ಕಾರ್ಯಾಚರಣೆ ನಡೆದಿದ್ದು ಅಬ್ದುಲ್ ಮುಕ್ತದೀರ್ ನ್ನು ಆತನ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಕ್ಕೂ ಮುನ್ನ ಬೆಂಗಳೂರು ಹಾಗೂ ದೆಹಲಿ ಎನ್ಐಎ ಅಧಿಕಾರಿಗಳು ಕೆಲದಿನಗಳ ಕಾಲ ಆತನ ಚಲನವಲನಗಳನ್ನು ಗಮನಿಸುತ್ತಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


