‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಣಿಪಾಲ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉದಯವಾಣಿ ದಿನಪತ್ರಿಕೆ ಸಂಸ್ಥಾಪಕ ತೋನ್ಸೆ ಮೋಹನದಾಸ್ ಪೈ(89) ಅವರು ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಟಿ.ಮೋಹನದಾಸ್ ಪೈ ಅವರು ಸಹೋದರರಾದ ಡಾ ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ಸಹೋದರಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ ಅವರನ್ನು ಅಗಲಿದ್ದಾರೆ.
ನಾಳೆ ಎಂಜಿಎಂ ಕಾಲೇಜಿನಲ್ಲಿ ಮೋಹನದಾಸ್ ಪೈ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೋಹನ್ ದಾಸ್ ಎಂ ಪೈ ಅವರು ಡಾ ಟಿ ಎಂ ಎ ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು. ಮೋಹನ್ ದಾಸ್ ಎಂ ಪೈ ನಿಧನ ಹಿನ್ನೆಲೆಯಲ್ಲಿ ನಾಳೆ ಡಾ ಟಿ ಎಂ ಎ ಪೈ ಫೌಂಡೇಶನ್ ನ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
1933ರ ಜೂ. 20ರಂದು ಜನಿಸಿದ ಮೋಹನದಾಸ್ ಪೈಯವರು ಡಾಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರವಾದ ಕಾರಣ ಇವರೂ ಮಣಿಪಾಲದಲ್ಲಿ ಬೆಳೆದರು. ತಂದೆಯವರು ಆರಂಭಿಸಿದ ಹೊಸ ಶಾಲೆಯಲ್ಲಿ(ಮಣಿಪಾಲ ಅಕಾಡೆಮಿ ಶಾಲೆ), ಉಡುಪಿಯ ಮೋಡರ್ನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಬಳಿಕ ತಂದೆಯವರು ನೂತನವಾಗಿ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ (1949-51) ಇಂಟರ್‌ಮೀಡಿಯೆಟ್ ಶಿಕ್ಷಣ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


