ರಾಜ್ಯ

777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ

ಭಾರೀ ಪ್ರಶಂಸೆಗೆ ಪಾತ್ರವಾಗಿ ಅತ್ಯುತ್ತಮ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ ಚಿತ್ರವನ್ನ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ.

777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ
ಚಾರ್ಲಿ ಸಿನಿಮಾ ವೀಕ್ಷಿಸಿದ ಬೊಮ್ಮಾಯಿ
Published On :

ಬೆಂಗಳೂರು: ಭಾರೀ ಪ್ರಶಂಸೆಗೆ ಪಾತ್ರವಾಗಿ ಅತ್ಯುತ್ತಮ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ ಚಿತ್ರವನ್ನ ಮುಖ್ಯಮಂತ್ರಿ ಬಸವರಾಜ್ ಎಸ್  ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ.  

ನಗರದ ಒರಾಯನ್ ಮಾಲ್ ಪಿವಿಆರ್  ನಲ್ಲಿ ವಿಶೇಷ ಪ್ರದರ್ಶಶದಲ್ಲಿ  777 ಚಾರ್ಲಿ ಕನ್ನಡ ಚಲನಚಿತ್ರವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ, ಬಿ ಸಿ ನಾಗೇಶ, ಶಾಸಕ ರಘುಪತಿ ಭಟ್, ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ ಮತ್ತು ಚಿತ್ರದ ನಿರ್ದೇಶಕ ಕಿರಣ್ ರಾಜ್, ನಾಯಕ ನಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಾರ್ಲಿ ಪಾತ್ರದಲ್ಲಿ ನಾಯಿಯೊಂದು ಕಾಣಿಸಿಕೊಂಡಿದ್ದು ಉತ್ತಮ ಕಥೆ ಹೊಂದಿರುವ ಸಿನಿಮಾ ಅತ್ಯುತ್ತಮ ಸಂದೇಶ ನೀಡಿದ್ದು ಭಾವನಾತ್ಮಕವಾಗಿದೆ ಎಂದು ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಶ್ವಾನಪ್ರಿಯರಾಗಿದ್ದು ಗೃಹಸಚಿವರಾಗಿದ್ದಾಗ ಅವರು ಸಾಕಿದ್ದ ನಾಯಿ ಸನ್ನಿ ಸಾವನ್ನಪ್ಪಿದಾಗ ಭಾವುಕರಾಗಿದ್ದನ್ನ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.