ಅಂತರ್ ರಾಜ್ಯ ಸಮಸ್ಯೆಗಳ ಇತ್ಯರ್ಥಕ್ಕೆ ಪಿಆರ್'ಒ ಕೆಲಸ ಮಾಡುತ್ತೇನೆ: ಲೆಹರ್ ಸಿಂಗ್
ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್'ಒ) ನಂತೆ ಇರುತ್ತೇನೆ ಮತ್ತು ಅಂತರ-ರಾಜ್ಯ ಸಮಸ್ಯೆಗಳ ಕುರಿತು ವಿವಿಧ ಪಕ್ಷಗಳು ಮತ್ತು ರಾಜ್ಯಗಳ ಸದಸ್ಯರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಮೇಕೆದಾಟು ಸಮತೋಲನ ಜಲಾಶಯದಂತಹ ಯೋಜನೆಗಳಲ್ಲಿ ರಾಜಕೀಯ ಮಾಡಬಾರದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. "ನಾನು ಅಂತಹ ಸಮಸ್ಯೆಗಳನ್ನು ಪರಿಹರಿಸಲು ಬಯಸುತ್ತೇನೆ ಮತ್ತು ಆ ರಾಜ್ಯಗಳ ಸದಸ್ಯರ ಮನಸ್ಸು ಗೆಲ್ಲಲು ಪ್ರಯತ್ನಿಸುತ್ತೇನೆ. ನಾವು ಎಲ್ಲರೊಂದಿಗೂ ಮಾತುಕತೆ ನಡೆಸಬೇಕು ಮತ್ತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


