ರಾಜ್ಯ

ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌ ನೇಮಕ

ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌ ನೇಮಕ
ಬಿಎಸ್ ಪಾಟೀಲ್
Published On :

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್‌ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್‌. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಬಿಎಸ್ ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್‌. ಪಾಟೀಲ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.