ನೂತನ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇದಕ್ಕೂ ಮೊದಲು ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ, ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು.
ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೂತನ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ
ಸಿದ್ದರಾಮಯ್ಯ ಶುಭಾಶಯ:
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


