ಬೆಂಗಳೂರು: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಆರಕ್ಷಕರು; ಐವರು ಪೊಲೀಸರಿಂದ ರಕ್ತದಾನ
ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆ್ಯಸಿಡ್ ದಾಳಿಯಿಂದ ತೀವ್ರ ಗಾಯಗೊಂಡು ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ 24 ವರ್ಷದ ಯುವತಿಯ ಶಸ್ತ್ರಚಿಕಿತ್ಸೆಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ರಕ್ತದಾನ ಮಾಡಿದ್ದು, ಇವರ ಕೆಲಸಕ್ಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪೋಷಕರ ನೋವಿಗೆ ಸ್ಪಂದಿಸಿದ ಪ್ರಶಾಂತ್, ಪ್ರೊಬೇಷನರಿ ಪಿಎಸ್‌ಐ ವಿಶ್ವನಾಥ್ ರೆಡ್ಡಿ, ಸಿಬ್ಬಂದಿ ಮೋಹನ್‌ಕುಮಾರ್, ಚಂದ್ರಯ್ಯ ಹಾಗೂ ನಟರಾಜ್ ಅವರು ಆಸ್ಪತ್ರೆಗೆ ಗುರುವಾರ ಹೋಗಿ ಐದು ಬಾಟಲಿ ರಕ್ತದಾನ ಮಾಡಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಆ್ಯಸಿಡ್ ದಾಳಿ ಪ್ರಕರಣದ ತನಿಖೆಯನ್ನು ಚುರುಕಿನಿಂದ ಮಾಡಿ ಆರೋಪಿಯನ್ನು ಬಂಧಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು, ಇದೀಗ ಸಂತ್ರಸ್ತ ಯುವತಿಗೆ ವೈದ್ಯರ ಸಲಹೆಯಂತೆ ರಕ್ತದಾನ ಮಾಡಿದ್ದಾರೆ. ಅಪರಾಧ ಭೇದಿಸುವುದಷ್ಟೇ ಅಲ್ಲ, ಸಾರ್ವಜನಿಕರ ಜೀವ ಉಳಿಸುವುದೂ ಪೊಲೀಸರ ಕೆಲಸ ಎಂಬುದನ್ನು ತೋರಿಸಿದ್ದಾರೆ’ ಎಂದು ಸಂಜೀವ್ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ತನ್ನನ್ನು ಮದುವೆಯಾಗಲು ನಿರಾಕರಿಸಿದರೆಂಬ ಕಾರಣಕ್ಕೆ ಆರೋಪಿ ನಾಗೇಶ್ ಬಾಬು (30) ಯುವತಿ ಮೇಲೆ ಏಪ್ರಿಲ್ 28ರಂದು ಆ್ಯಸಿಡ್ ಎರಚಿದ್ದ. ಆತನ ಕಾಲಿಗೆ ಗುಂಡು ಹೊಡೆದು, ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಯುವತಿಗೆ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


