ರಾಜ್ಯ

ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದ ರಾಜ್ಯ ಸರ್ಕಾರ

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯ್ತಿ ಘೋಷಿಸಿದೆ.

ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದ ರಾಜ್ಯ ಸರ್ಕಾರ
777 ಚಾರ್ಲಿ ಸಿನಿಮಾ ಸ್ಟಿಲ್
Published On :

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯ್ತಿ ಘೋಷಿಸಿದೆ. 

ಭಾವನೆಗಳೇ ಇಲ್ಲದೇ ಬದುಕುತ್ತಿದ್ದ ವ್ಯಕ್ತಿಯೋರ್ವ ಶ್ವಾನದೊಂದಿಗೆ ಭಾವನಾತ್ಮಕ ಬಾಂಧವ್ಯ ಬೆಳೆಸಿಕೊಳ್ಳುವ ಕಥಾಹಂದರ ಹೊಂದಿರುವ 777 ಚಾರ್ಲಿ’ ಸಿನಿಮಾಗೆ ಭಾರಿ ಜನಪ್ರಿಯತೆ ದೊರೆತಿದ್ದು, ಸ್ವತಃ ಸಿಎಂ ಬೊಮ್ಮಾಯಿ ಸಿನಿಮಾ ವೀಕ್ಷಿಸಿ ಭಾವುಕರಾಗಿದ್ದರು. 

ಮಕ್ಕಳಿಂದ ವಯೋವೃದ್ಧರವರೆಗೆ ಎಲ್ಲರಿಗೂ ಇಷ್ಟವಾಗುವ ಸಿನಿಮಾ ಎಂಬ ಮೆಚ್ಚುಗೆಯನ್ನು ಗಳಿಸಿರುವ ‘777 ಚಾರ್ಲಿ’ ಚಿತ್ರದ ಟಿಕೆಟ್‌ಗಳ ಮೇಲಿನ ರಾಜ್ಯ ಸರಕು ಮತ್ತು ಸೇವಾ ತೆರಿಗೆಯನ್ನು (ಎಸ್‌ಜಿಎಸ್‌ಟಿ) ಆರು ತಿಂಗಳ ಅವಧಿಗೆ ಸಂಗ್ರಹಿಸಬಾರದು ಹಾಗೂ ’ಪ್ರದರ್ಶಕರು ‘777 ಚಾರ್ಲಿ’ ಸಿನಿಮಾದ ಟಿಕೆಟ್ ಮೇಲೆ ಎಸ್‌ಜಿಎಸ್‌ಟಿ ವಿಧಿಸತಕ್ಕದ್ದಲ್ಲ ಮತ್ತು ಸಂಗ್ರಹಿಸತಕ್ಕದ್ದಲ್ಲ ಹಾಗೂ ಎಸ್‌ಜಿಎಸ್‌ಟಿ ಮೊತ್ತವನ್ನು ಕಡಿತಗೊಳಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಾಟ ಮಾಡತಕ್ಕದ್ದು’’ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.