ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ(ಜೂನ್ 18)ದಂದು ಪ್ರಕಟಗೊಂಡಿದ್ದು ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ(ಜೂನ್ 18)ದಂದು ಪ್ರಕಟಗೊಂಡಿದ್ದು ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಬಳ್ಳಾರಿಯ ಶ್ವೇತಾ ಭೀಮಶಂಕರ ಬೈರಗೊಂಡ ಮತ್ತು ಕೊಟ್ಟೂರಿನ ಸಹನಾ ಮಡಿವಾಳರ್ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಾನವ ವಿನಯ್ ಕೇಜ್ರಿವಾಲ್, ನೀಲು ಸಿಂಗ್, ಆಕಾಶ್ ದಾಸ್ ಮತ್ತು ನೇಹಾ ಬಿ ಆರ್ 596 ಹಾಗೂ ವಿಜ್ಞಾನ ವಿಭಾಗದಲ್ಲಿ ಸೀಮ್ರಾನ್ ಶೇಷರಾವ್, ಇಲಂ ಮೊಹಮ್ಮದ್ ರಫೀಕ್, ಸಾಯಿ ಚಿರಾಗ್, ಶ್ರೀಕೃಷ್ಣ ಪೇಜತಾಯ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ. 

ಕಳೆದ ಏಪ್ರಿಲ್ 23ರಿಂದ ಮೇ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 6,84,255 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಆ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರಾಗಿದ್ದರು. ರಾಜ್ಯದ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 

ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ.88.02ರಷ್ಟು ಉತ್ತೀರ್ಣರಾಗಿ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.