ರಾಜ್ಯ

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ

ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಮೃತದೇಹ ಪತ್ತೆಯಾಗಿರುವುದು
Published On :

ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. 

ಗಾಯತ್ರಿ ಬಡಾವಣೆಯ ಎಸ್‌ಆರ್‌ ಲೇಔಟ್‌ ಬಳಿ ದ್ವಿಚಕ್ರ ವಾಹನವೊಂದು ರಾಜಕಾಲುವೆಗೆ ಬೀಳುತ್ತಿತ್ತು. ಇದನ್ನು ತಪ್ಪಿಸಲು ಹೋಗಿ ಮಿಥುನ್‌ ನೀರಿನಲ್ಲಿ ಕೊಚ್ಚಿಹೋಗಿದ್ದ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎನ್​ಡಿಆರ್‌ಎಫ್‌ ಸಿಬ್ಬಂದಿ ಸತತ 48 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
    
ನಿನ್ನೆ ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸರು ಸೇರಿ 30ಕ್ಕೂ ಹೆಚ್ಚು ಸಿಬ್ಬಂದಿ ನಾಲ್ಕು ತಂಡಗಳಾಗಿ ಸೀಗೆಹಳ್ಳಿ ಕೆರೆ ಮತ್ತು ರಾಜಕಾಲುವೆ ಸುತ್ತಮುತ್ತ ಸುಮಾರು ಐದಾರು ಗಂಟೆಗಳ ಶೋಧ ನಡೆಸಿದ್ದರು. 

ಇದರಂತೆ ಇಂದು ಬೆಳಿಗ್ಗೆ ಕೂಡ ಶೋಘ ಕಾರ್ಯಾಚರಣೆ ಆರಂಭಿಸಿದಾಗ ಯುವಕ ಕೊಚ್ಚಿಕೊಂಡ ಹೋದ ಸ್ಥಳದಿಂದ ಸುಮಾರು 1 ಕಿಮೀ ದೂರದಲ್ಲಿ ಮೃತದೇಹ ದೊರೆತಿದೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟರ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನಿಗಾಗಿ ಕಾಯುತ್ತಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.