ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಶೈಲಜಾ ಅವರ ನಿವಾಸಕ್ಕೆ ನುಗ್ಗಿರುವ ದುಷ್ಕರ್ಮಿಗಳು, ಕಿಟಕಿ ಗಾಜುಗಳನ್ನು ಒಡೆದು ಗೋಡೆಗಳಿಗೆ ಕಪ್ಪು ಮಸಿ ಎರಚಿದ್ದಾರೆ. ಈ ಸಂಬಂಧ ವಕೀಲರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶೈಲಜಾ ಅವರ ನಿವಾಸಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಮೂಲಗಳು ಹೇಳಿವೆ.
ಈ ಮಧ್ಯೆ ಹಿಂದೂ ದೇವರನ್ನು ಕ್ಲಬ್ ಹೌಸ್ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಆರೋಪಿಸಿ ಶೈಲಜಾ ಅಮರನಾಥ್ ಸೇರಿದಂತೆ ನಾಲ್ವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪುತ್ತೂರಿನ ಹಿಂದುತ್ವ ಸಂಘಟನೆಗಳ ಮುಖಂಡರು ನಿನ್ನೆ ಮಧ್ಯಾಹ್ನ ಈ ಬಗ್ಗೆ ದೂರು ದಾಖಲಿಸಿದ್ದಾರೆ.
ಜೂ. 16 ರಂದು ಕ್ಲಬ್ ಹೌಸ್‌ನ ಚರ್ಚೆಯೊಂದರಲ್ಲಿ ಶ್ರೀರಾಮ, ಹನುಮಾನ್ ಮತ್ತು ಸೀತಾ ದೇವತೆ ಬಗ್ಗೆ ಶೈಲಜಾ ಅಮರನಾಥ್ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ತೀವ್ರವಾಗಿ ಖಂಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


