ಪ್ರಧಾನಿ ಭೇಟಿ: ಕೋವಿಡ್ ಪರೀಕ್ಷೆ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ
ನಾಳೆ ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಭದ್ರತೆ ಬಗ್ಗೆ ತೀವ್ರ ಗಮನ ಹರಿಸಲಾಗುತ್ತಿದೆ. ಅದರಲ್ಲೂ ಪಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಡ್ಡಾಯ ಕೋವಿಡ್ ಟೆಸ್ಟ್ ಗೆ ಒಳಗಾಗಿರಬೇಕೆಂದು ಸೂಚಿಸಲಾಗಿದೆ.

ಬೆಂಗಳೂರು: ನಾಳೆ ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಭದ್ರತೆ ಬಗ್ಗೆ ತೀವ್ರ ಗಮನ ಹರಿಸಲಾಗುತ್ತಿದೆ. ಅದರಲ್ಲೂ ಪಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಡ್ಡಾಯ ಕೋವಿಡ್ ಟೆಸ್ಟ್ ಗೆ ಒಳಗಾಗಿರಬೇಕೆಂದು ಸೂಚಿಸಲಾಗಿದೆ.
ನಾಳೆಯ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಮುಖ್ಯಮಂತ್ರಿ ಅವರ ಆರ್. ಟಿ ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಕೋವಿಡ್ ಪರೀಕ್ಷೆ ನಡೆಸಿದರು.
ಈ ಮಧ್ಯೆ ಆರ್ ಟಿ ನಗರದಲ್ಲಿ ಮಾತನಾಡಿದ ಸಿಎಂ, ನಾಳೆ ಸಂಜೆ ಮೈಸೂರಿನಲ್ಲಿ ಸಾರ್ವಜನಿಕ ಸಭೆ, ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಮೋದಿ ಭೇಟಿ ಕೊಡ್ತಿದ್ದಾರೆ. ಎಲ್ಲ ಸಿದ್ಧತೆಗಳೂ ಆಗಿವೆ. ಪಠ್ಯ ಪರಿಷ್ಕರಣೆ ವಿಚಾರವನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಈಗಾಗಲೇ ಪಠ್ಯ ಪರಿಷ್ಕರಣೆ ಪಬ್ಲಿಕ್ ಡೊಮೇನ್ ನಲ್ಲಿದೆ. ಲೋಪ ಇದ್ರೆ ತಿಳಿಸಬಹುದು ಎಂದರು.
ಬಳಿಕ ಅಗ್ನಿಪಥ ಪ್ರತಿಭಟನೆ ವಿಚಾರದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರೀತಿದೆ. ಅಗ್ನಿಪಥ ಯೋಜನೆ ಮೂಲಕ ಸಶಕ್ತ ಯುವ ಶಕ್ತಿ ರೂಪಿಸಲಾಗುತ್ತೆ. ಈಗಾಗಲೇ ಸೇನಾ ಪರೀಕ್ಷೆ ಬರೆದ ಕೆಲವರಿಗೆ ಆತಂಕ ಇರಬಹುದು. ಅದನ್ನೆಲ್ಲ ಕೇಂದ್ರ ಸರ್ಕಾರ ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ. ಆದ್ರೆ ಈ ನೆಪದಲ್ಲಿ ಪ್ರತಿಭಟನೆ, ಟ್ರೈನಿಗೆ ಬೆಂಕಿ ಹಾಕೋದು ಸರಿಯಲ್ಲ ಎಂದು ತಿಳಿಸಿದರು.
ಇನ್ನು ಚಾರ್ಲಿ ಸಿನಿಮಾಕ್ಕೆ ಜಿಎಸ್ಟಿ ವಿನಾಯ್ತಿ ಹಿನ್ನೆಲೆ, ಬೇರೆ ಚಿತ್ರಗಳಿಗೂ ತೆರಿಗೆ ವಿನಾಯ್ತಿಗೆ ಒತ್ತಾಯ ಹೆಚ್ಚಾಗುತ್ತಿದೆ. ಯಾರೆಲ್ಲ ಮನವಿ ಕೊಡ್ತಾರೋ ಅವುಗಳ ಬಗ್ಗೆ ಪರಿಶೀಲನೆ ಮಾಡ್ತೇವೆ ಎಂದು ಸಿಎಂ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


