ರಾಜ್ಯ

ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ

ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ
ಅಪಘಾತಕ್ಕೀಡಾದ ಲಾರಿ ಮತ್ತು ಕಾರಿನ ಚಿತ್ರ
Published On :

ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಟೈರ್ ಪಂಚರ್ ಆಗಿ ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ ಗೆ ಡಿಕ್ಕಿಯಾಗಿ ಇಬ್ಬರು ಯುವತಿಯರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಮೃತರನ್ನು ಮೈಸೂರು ಹೊರವಲಯದ ಆಲನಹಳ್ಳಿಯ ಸಾಫ್ಟ್ ವೇರ್ ಎಂಜಿನಿಯರ್ ಜೀವಿತಾ (24) ಹಾಗೂ ಆಕೆಯ ಗೆಳತಿ ಪ್ರತೀಕ್ಷಾ 24) ಎಂದು ಗುರುತಿಸಲಾಗಿದೆ. ಮೃತರು ಮೈಸೂರು ಕಡೆಯಿಂದ ಹುಣಸೂರಿನತ್ತ ಶನಿವಾರ ಸಂಜೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.