'ನರೇಂದ್ರ ಮೋದಿ ಬಂದು ಯೋಗ ಮಾಡುವುದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆ'
ಪ್ರಧಾನಿ ನರೇಂದ್ರ ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಗದಗ: ಮುಂದಿನ ವರ್ಷ ಮೇ ತಿಂಗಳಲ್ಲಿ ಚುನಾವಣೆ ಆಗುತ್ತೆ, ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದಿರೋದು ಚುನಾವಣೆಗೆ ಅನುಕೂಲವಾಗುತ್ತದೆ, ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಮಿಲಿಟರಿ ಸೇರಬೇಕು ಎನ್ನುವವರು ದೇಶ ಭಕ್ತರು ಅಲ್ವಾ ಎಂದು ಪ್ರಶ್ನಿಸಿದ ಅವರು, ಅವರಿಗೆ ದೇಶದ ಬಗ್ಗೆ ಪ್ರೀತಿ, ಪ್ರೇಮ, ಸ್ವಾಭಿಮಾನ ಇರಬೇಕು. ಲಾರಿ, ರೈಲು ಸುಡುತ್ತಾರೆ. ಇಂತವರು ಆರ್ಮಿಗೆ ಸೇರಿ ಏನು ಕೆಲಸ ಮಾಡ್ತಾರೆ ಎಂದು ಪ್ರತಿಭಟನಾಕಾರರ ವಿರುದ್ಧ ಹರಿಹಾಯ್ದರು.
ಇವರು ಯಾವ ದೇಶವನ್ನು ಉದ್ಧಾರ ಮಾಡ್ತಾರೆ, ಅವರನ್ನು ಯಾವುದೋ ಒಂದು ಶಕ್ತಿ ಪ್ರಚೋದನೆ ಮಾಡುತ್ತಿದೆ ಎಂದ ಪಾಟೀಲ್, ಅಷ್ಟೊಂದು ಯುವಕರು ಸಡನ್ ಆಗಿ ಹೇಗೆ ಸೇರುತ್ತಾರೆ. ಪಟ್ಟಭದ್ರ ಹಿತಾಸಕ್ತಿಗಳು ಇವರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ. ಮೋದಿಯವರ ವರ್ಚಸ್ಸು ಕುಗ್ಗಿಸಲು ಯುವಕರನ್ನು ಪ್ರಚೋದನೆ ಮಾಡಿ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ದಯಮಾಡಿ ಯುವಕರು ಇದಕ್ಕೆ ಕಿವಿಗೊಡಬಾರದು ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


