ಸರ್ಕಾರ ರಚಿಸಲು ಶಿವಸೇನೆ ಬಂಡಾಯ ಶಾಸಕರಿಗೆ ಬಿಜೆಪಿ ಬೆಂಬಲ: ಮುರುಗೇಶ್ ನಿರಾಣಿ
ಅವಕಾಶಗಳು ಬಾಗಿಲು ತಟ್ಟಿದಾಗ ಕಣ್ಣು ಮುಚ್ಚುವ ಸನ್ಯಾಸಿಗಳ ಪಕ್ಷ ಬಿಜೆಪಿಯಲ್ಲ’ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಶನಿವಾರ ಹೇಳಿದ್ದಾರೆ.

ಕಲಬುರಗಿ: ‘ಅವಕಾಶಗಳು ಬಾಗಿಲು ತಟ್ಟಿದಾಗ ಕಣ್ಣು ಮುಚ್ಚಿಕೊಂಡಿರುವ ಸನ್ಯಾಸಿಗಳ ಪಕ್ಷ ಬಿಜೆಪಿಯಲ್ಲ’ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಶನಿವಾರ ಹೇಳಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ಶಾಸಕರು ಸಮ್ಮಿಶ್ರ ಸರ್ಕಾರ ರಚಿಸಲು ಬಿಜೆಪಿಯ ಬೆಂಬಲವನ್ನು ಕೋರಿದರೆ ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ಮತ್ತು ಶಿವಸೇನೆ 25 ವರ್ಷಗಳಿಂದ ಮೈತ್ರಿಯಲ್ಲಿದ್ದು ಎರಡೂ ಪಕ್ಷಗಳ ಸಿದ್ಧಾಂತಗಳು ಒಂದೇ ಆಗಿರುವುದರಿಂದ ಇದು ಅನೈತಿಕವಲ್ಲ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಸಮ್ಮಿಶ್ರ ಸರ್ಕಾರವು ಅನೈತಿಕವಾಗಿದೆ, ಏಕೆಂದರೆ ಎಲ್ಲಾ ಮೂರು ಪಕ್ಷಗಳ ಸಿದ್ಧಾಂತಗಳು ವಿಭಿನ್ನವಾಗಿವೆ ಎಂದು ತಿಳಿಸಿದರು.
ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರಿಗೆ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ಶಿವಸೇನೆ ನಾಯಕರು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ, ಇದೀಗ ಅಧಿಕಾರಕ್ಕೆ ಬರಲು ಬಿಜೆಪಿ ಜೊತೆಗೆ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಬಂಡಾಯ ನಾಯಕರು ಬಿಜೆಪಿಯೊಂದಿಗೆ ಕೈಜೋಡಿಸಿದ್ದೇ ಆದರೆ, ಮಹಾರಾಷ್ಟ್ರದಲ್ಲಿ ಉತ್ತಮ ಆಡಳಿತ ನಡೆಸುತ್ತೇವೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


