ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ: ಸಿಎಂ ಬೊಮ್ಮಾಯಿ
ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.
ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ನಲ್ಲಿ ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ಉದ್ಘಾಟಿಸಿ ಮಾತನಾಡಿದ ಸಿಎಂ, ಬೆಳಗಾವಿ ಪ್ರಮುಖವಾದ ವಾಣಿಜ್ಯ ಕೇಂದ್ರ. ಇಲ್ಲಿ ಹಲವಾರು ಉದ್ದಿಮೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿಗೆ ಚಾಲನೆಯನ್ನು ನೀಡಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುಮತಿಗಳನ್ನು ನೀಡಿದೆ. ಬೆಳಗಾವಿಯಲ್ಲಿ ಹಲವಾರು ಅಭಿವೃದ್ಧಿಯ ಕಾರ್ಯಕ್ರಮಗಳು ಕೈಗೊಳ್ಳಲಾಗುತ್ತಿವೆ ಎಂದು ತಿಳಿಸಿದರು.
ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ನಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳು ವಿವಿಧ ದರಗಳಲ್ಲಿ ಒಂದೇ ಸೂರಿನಡಿ ಲಭ್ಯವಿದ್ದು, ವಸ್ತ್ರಪ್ರಿಯರಿಗೆ ಸಂತೋಷವನ್ನು ನೀಡಲಿದೆ ಎಂದು ಬೊಮ್ಮಾಯಿ ಹೇಳಿದರು.
ಕರ್ನಾಟಕದವರೇ ಆದ ಬಿಎಸ್ ಸಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಕನ್ನಡದವಲ್ಲಿ ವ್ಯಾಪಾರ ಮಾಡುವ ಯುಕ್ತಿ , ಶಕ್ತಿ ಇದೆ, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂಬುದನ್ನು ಬಿಎಸ್ ಸಿ ಕುಟುಂಬದವರು ನಿರೂಪಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


