ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ; ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು: ಎಸ್.ಎಂ.ಕೃಷ್ಣ
ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು.

ಬೆಂಗಳೂರು: ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯುತ್ಸವದಲ್ಲಿ 'ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದರು. 1998-99ರಲ್ಲಿ ರಾಷ್ಟ್ರದ ಸಿಲಿಕಾನ್ ಕೇಂದ್ರ ಯಾವ ನಗರ ಆಗಬೇಕು ಎಂಬ ವಿಷಯದಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ತೀವ್ರ ಪೈಪೋಟಿ ಇತ್ತು. ಅಂತಿಮವಾಗಿ ಬೆಂಗಳೂರು ಯಶಸ್ಸು ಪಡೆಯಿತು. ಅದನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು.
ದೇಶದ ಅತ್ಯಂತ ಹಿರಿಯ ಸ್ವಾತಂತ್ರ್ಯ ಯೋಧ ಕೆಂಪೇಗೌಡ ಎಂದು ಎಸ್ ಎಂ ಕೃಷ್ಣ ಬಣ್ಣಿಸಿದರು. ಬೆಂಗಳೂರನ್ನು ಸುಂದರವಾಗಿ ಮಾಡಲು ಅವರು ಮುಂದಾಗಿದ್ದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಟ್ಟಿದ್ದಕ್ಕೆ ಅಂದಿನ ಪ್ರಧಾನಿಯಾಗಿದ್ದ ಮನಹೋಹನ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕೆಂಪೇಗೌಡ ಅವರು ಬೆಂಗಳೂರಿನ ದಿಕ್ಕು ದೆಸೆಗಳನ್ನು ನಿರ್ಣಯಿಸಿದವರು. ಅವರು ಬೆಂಗಳೂರು ಬಗ್ಗೆ ದೊಡ್ಡ ಕನಸನ್ನು ಹೊಂದಿದ್ದರು. ಕೆಂಪೇಗೌಡರು ಯಾರೇ ಒಬ್ಬರ ಸ್ವತ್ತಲ್ಲ. ಅವರು ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದ ಜನರ ಸ್ವತ್ತು ಎಂದರು. ಬೆಂಗಳೂರು ಜನರು ಎಲ್ಲ ಒತ್ತಡಕ್ಕೆ ಮಣಿಯದೆ ನಿಂತು ಬೆಂಗಳೂರು ಕಟ್ಟಿದ್ದಾರೆ. ಬೆಂಗಳೂರು ಸಿಲಿಕಾನ್ ಸಿಟಿ ಆಗಲು ಲಕ್ಷಾಂತರ ಯುವಕ-ಯುವತಿಯರ ಕಮಿಟ್ಮೆಂಟ್, ಶೃದ್ಧೆ ಇದರ ಹಿಂದಿದೆ ಎಂದು ಸ್ಮರಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


