'ಕಡ್ಡಾಯ ಮಾಸ್ಕ್' ಗಂಭೀರತೆ ಪರಿಗಣಿಸದ ಜನ: 'ದಂಡ' ಹಾಕಲು ಬಿಬಿಎಂಪಿ ಚಿಂತನೆ!
ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 'ದಂಡ' ಹಾಕುವ ಬಗ್ಗೆಯೂ ಚಿಂತಿಸುತ್ತಿದೆ.

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಕಡ್ಡಾಯಗೊಳಿಸಿದ ನಂತರ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 'ದಂಡ' ಹಾಕುವ ಬಗ್ಗೆಯೂ ಚಿಂತಿಸುತ್ತಿದೆ.
ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿದಿನ 17,000 ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲಿ 600 ರಿಂದ 700 ಪ್ರಕರಣಗಳು ಪತ್ತೆಯಾಗುತ್ತಿವೆ. ಗಂಭೀರ ಪರಿಸ್ಥಿತಿ ಇಲ್ಲದಿರುವುದರಿಂದ ಮನೆಯಲ್ಲೇ ಐಸೋಲೇಷನ್ ಆಗುತ್ತಿದ್ದು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
'ಕೇವಲ 60 ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು 10 ಇತರರು ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀನೋಮ್ ಅನುಕ್ರಮವೂ ಸಹ ನಡೆಯುತ್ತಿದೆ ಎಂದು ತ್ರಿಲೋಕ್ ಚಂದ್ರ ಹೇಳಿದರು.
ಕಡ್ಡಾಯ ಮಾಸ್ಕ್ ನಿಯಮವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸದಿರುವುದು ಕಂಡುಬಂದಿರುವುದರಿಂದ ದಂಡ ಹಾಕುವಂತೆ ತಾಂತ್ರಿಕ ಸಲಹಾ ಸಮಿತಿಯು ಸೂಚಿಸಿದ್ದು ಮಹದೇವಪುರ ವಲಯದಲ್ಲಿ ಪ್ರಕರಣಗಳು ಹೆಚ್ಚಿರುವುದರಿಂದ ಲಸಿಕೆ ಮತ್ತು ಬೂಸ್ಟರ್ ಡೋಸ್ ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆಯುಕ್ತರು ಒತ್ತಿ ಹೇಳಿದರು.
ಪಾಲಿಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ನಿರ್ಧಾರವನ್ನು ಸರ್ಕಾರಕ್ಕೆ ಬಿಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


