ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ
ರಾಜ್ಯದಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ರಾಜ್ಯದಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬೊಮ್ಮಾಯಿಯವರು, ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿ, ಕರುನಾಡು ಸಸ್ಯ ಶ್ಯಾಮಲೆಯ ತವರೂರು ಅನ್ನಪೂರ್ಣೆಯ ನೆಲೆಬೀಡು ಶಿಲ್ಪಕಲೆಗಳ ಸಿರಿನಾಡು, ಜೀವ ನದಿಗಳು ಹರಿದಾಡುವ ಪುಣ್ಯ ಭೂಮಿ, ನಿಸರ್ಗ ಚೆಲುವಿನ ಅದ್ಬುತ ಕರ್ಮಭೂಮಿ. ನಾಡಿನ ಸಮಸ್ತ ಕನ್ನಡಿಗರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


