ವನ್ಯ ಪ್ರಾಣಿಗಳಿಗೆ ವಿದ್ಯುತ್ ಸ್ಪರ್ಶ: ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ರಾಜ್ಯದಲ್ಲಿ ಆನೆಗಳು ಮತ್ತು ಇತರ ಕಾಡು ಪ್ರಾಣಿಗಳ ಸಾವಿಗೆ ಕಾರಣವಾಗುವ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಆನೆಗಳು ಮತ್ತು ಇತರ ಕಾಡು ಪ್ರಾಣಿಗಳ ಸಾವಿಗೆ ಕಾರಣವಾಗುವ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.
ವಕೀಲ ಅಂಕುಶ ಯೆನ್ನೆಮಜಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಿದ್ಯುದಾಘಾತದಿಂದ ಆನೆಗಳು ಮೃತಪಟ್ಟ ಸುದ್ದಿ ವರದಿಗಳನ್ನು ಉಲ್ಲೇಖಿಸಿ, 'ಕರ್ನಾಟಕದ ಅರಣ್ಯ ಇಲಾಖೆ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಈಗ ಕರ್ನಾಟಕದ ಹಲವಾರು ಸ್ಥಳಗಳಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಂಪರ್ಕಗಳನ್ನು ನೀಡಲಾಗುತ್ತಿರುವ ಬಗ್ಗೆ ತಲೆಕೆಡಿಸಿಕೊಂಡಂತೆ ತೋರುತ್ತಿಲ್ಲ ಎಂದು ಪಿಐಎಲ್‌ನಲ್ಲಿ ಹೇಳಿದೆ.
ರಾಜ್ಯದ ಅರಣ್ಯಗಳಲ್ಲಿ ಸುಮಾರು 6,000 ಆನೆಗಳ ಪೈಕಿ 70 ಆನೆಗಳು 2021ರಲ್ಲಿ ಮೃತಪಟ್ಟಿವೆ. ಅವುಗಳಲ್ಲಿ 15 ವಿದ್ಯುದಾಘಾತ ಸೇರಿದಂತೆ ಅಸ್ವಾಭಾವಿಕ ಕಾರಣಗಳಿಂದಾಗಿ ಎಂದು ಅದು ಆರೋಪಿಸಿದೆ.
ಇಂತಹ ಕಾಡು ಪ್ರಾಣಿಗಳ ಸಾವುಗಳನ್ನು ತಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಪಿಐಎಲ್ ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


