ರಾಜ್ಯ

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ

ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ
ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್
Published On :

ದಾವಣಗೆರೆ: ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ನಗರ ದಾವಣಗೆರೆಯಾಗಿದೆ. ಯುಎಂಐ ಸಮ್ಮೇಳನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ವಿಶೇಷ ಕರ್ತವ್ಯ ಅಧಿಕಾರಿ (ಯುಟಿ) ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ ಜೈದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 6 ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ನಡೆಯಲಿದೆ.

ನಗರದಾದ್ಯಂತ 248 ಎಚ್‌ಡಿ ಸಿಸಿಟಿವಿ ಅಳವಡಿಕೆ, 23 ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟಿಂಗ್ ಮತ್ತು ಇಂಟೆಲಿಜೆಂಟ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸಿಸ್ಟಂ ಅಳವಡಿಕೆ, ತಾಂತ್ರಿಕ ಉನ್ನತೀಕರಣ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಡಿಎಸ್‌ಸಿಎಲ್‌ನ ಎಂಡಿ ರವೀಂದ್ರ ಬಿ ಮಲ್ಲಾಪುರ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.