ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 65 ಸೇರಿ ರಾಜ್ಯದಲ್ಲಿ 106 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 106 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,313ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 106 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,313ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,257 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 65 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,884ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 364 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,27,098ಕ್ಕೆ ಏರಿಕೆಯಾಗಿದೆ. ಇನ್ನು 1,916 ಸಕ್ರಿಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


