ರಾಜ್ಯ

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ಆರೋಗ್ಯ ಸಚಿವ ಸುಧಾಕರ್
Published On :

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯವಿರುವುದಿಲ್ಲ. ಯಾವುದೇ ದಾಖಲೆಗಳು ಇಲ್ಲದಿದ್ದರೂ ಚಿಕಿತ್ಸೆ ನೀಡಬೇಕೆಂದು ತಿಳಿಸಿದೆ.

ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದ್ದು, ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು ಎಂದು ಹೇಳಿದೆ.

ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು. ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ ಎಂದು ಎಚ್ಚರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.