ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.

ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.
ಎಫ್ ಐಆರ್ ನಲ್ಲಿ ಐಸಿಸಿ ಸೆಕ್ಷನ್ 302, 201 ಮತ್ತು 427 ಅಡಿ ಕೊಲೆ, ಸಾಕ್ಷ್ಯನಾಶ, ಮತ್ತು ವಾಹನ ಜಖಂ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮೃತ ಚಂದ್ರಶೇಖರ್ ಅವರ ತಂದೆ ರಮೇಶ್ ನೀಡಿರುವ ದೂರಿನ ಅನ್ವಯ ಎಫ್ ಐಆರ್ ದಾಖಲಾಗಿಸಿದೆ. ಈ ಮೊದಲು ವ್ಯಕ್ತಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ತುಂಗಾ ನಾಲೆಯಲ್ಲಿ ಪತ್ತೆಯಾದ ಕಾರಿನ ಹಿಂಬದಿಯ ಸೀಟ್ ನಲ್ಲಿ ಚಂದ್ರು ಮೃತದೇಹ ಪತ್ತೆಯಾಗಿತ್ತು. ಕೈಕಾಲು ಕಟ್ಟಿಹಾಕಿ, ಕಿವಿಗಳಿಗೆ ಹಲ್ಲೆ ಮಾಡಲಾಗಿದೆ. ಕಾರು ಪತ್ತೆಯಾಗಿದ್ದ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ವೇಳೆ ಎಫ್ ಎಸ್ ಎಲ್ ತಜ್ಞರು ಸ್ಯಾಂಪಲ್ ಗಳನ್ನು ಸಂಗ್ರಹಿಸಿದೆ. ಇನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ರೇಣುಕಾಚಾರ್ಯ ನೇರವಾಗಿ ಇದೊಂದು ಕೊಲೆ ಎಂದಿದ್ದಾರೆ. ಒಟ್ಟಾರೆ ಚಂದ್ರಶೇಖರ್ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


