ಚಳ್ಳಕೆರೆ: ಒಂದೇ ಕುಟುಂಬದ ಮೂವರು ಮಹಿಳೆಯರ ನಿಗೂಢ ಸಾವು!
ಒಂದೇ ಕುಟುಂಬದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.

ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ನಿವಾಸಿ ತಿಪ್ಪಜ್ಜಿ (75), ಪುತ್ರಿಯರಾದ ಮಾರಕ್ಕ (45) ಹಾಗೂ ದ್ಯಾಮಕ್ಕ (43) ಮೃತಪಟ್ಟವರು. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಮೂವರು ಮಹಿಳೆಯರು ಮಾತ್ರ ಮನೆಯಲ್ಲಿದ್ದರು. ಬುಧವಾರ ರಾತ್ರಿ ಮಲಗಿದ್ದ ಇವರು ಗುರುವಾರ ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಿಟಕಿ ತೆರೆದು ನೋಡಿದಾಗ ಮಲಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಪರಿಶೀಲಿಸಿದಾಗ ಮೂವರು ಮೃತಪಟ್ಟಿರುವುದು ಖಚಿತವಾಗಿದೆ. ತಿಪ್ಪಜ್ಜಿ ಪುತ್ರ ದ್ಯಾಮಣ್ಣ (47) ಅನಾರೋಗ್ಯ ಸಮಸ್ಯೆಯಿಂದ ಕೆಲ ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು.
ಪತಿ ಕೆಂಚಪ್ಪ ಕೂಡ ವರ್ಷದ ಹಿಂದೆ ಕೊನೆಯುಸಿರೆಳೆದಿದ್ದರು. ಮಾರಕ್ಕ ಮತ್ತು ದ್ಯಾಮಕ್ಕ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡು ತವರು ಸೇರಿದ್ದರು. ಇದರಿಂದ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿತ್ತು. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಚಳ್ಳಕೆರೆ ಠಾಣೆಯ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ತಿಂಗಳು ಮುಗಿಯುವ ಮುನ್ನವೇ ಮೂರು ಜನ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಳ್ಳಕೆರೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


