ರಾಜ್ಯ

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ 

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ 
ಅಶೋಕ್ ಕಶ್ಯಪ್
Published On :

ಬೆಂಗಳೂರು: ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅಶೋಕ್ ಕಶ್ಯಪ್ ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್ ಆಗಿದ್ದು, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನ ಸುನಿಲ್ ಪುರಾಣಿಕ್ ಅವರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತೆರವುಗೊಂಡಿತ್ತು.

ಕರ್ನಾಟಕ ಚಲನಚಿತ್ರ ಅಕಾಡೆಮಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯಲ್ಲಿದ್ದು, ಮುಂದಿನ 3 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಶೋಕ್ ಕಶ್ಯಪ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳಿಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಪಡೆದ ತಲೆದಂಡ ಸಿನಿಮಾಗೆ ಅಶೋಕ್ ಕಶ್ಯಪ್ ಅವರೇ ಸಿನಿಮಾಟೋಗ್ರಾಫರ್ ಆಗಿದ್ದರು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.