ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಬಾಲಕಿ ಸಾವು, ತನಿಖೆ ಪ್ರಗತಿಯಲ್ಲಿ
ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ.

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 9 ವರ್ಷದ ಬಾಲಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ಮಧ್ಯೆ ಶಾಲೆಯಲ್ಲಿ ಶಿಕ್ಷಕರು ಕೊಟ್ಟ ಏಟಿನಿಂದ ಬಾಲಕಿ ಸಾವನ್ನಪ್ಪಿರುವುದಾಗಿ ಅವರ ಪೋಷಕರು ಆರೋಪಿಸಿದ್ದಾರೆ. ಇದು ಸಹಜ ಸಾವು ಎಂದು ಶಾಲೆ ಹೇಳಿದೆ.
ಜಾಲಹಳ್ಳಿಯ ಗಂಗಮ್ಮನಗುಡಿ ಆರ್ ಡಿ ಇಂಟರ್ ನ್ಯಾಷನಲ್ ಸ್ಕೂಲ್ ನ 4ನೇ ತರಗತಿ ವಿದ್ಯಾರ್ಥಿ ನಿಶಿತಾ ಶುಕ್ರವಾರ ಶಾಲಾ ಕೊಠಡಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಳು. ನಂತರ ಆಕೆಯನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು, ತದನಂತರ ಆಕೆ ಸಾವನ್ನಪ್ಪಿದ್ದರು.
ಹೃದಯ ಸಮಸ್ಯೆಯಿಂದ ಆಕೆ ಕುಸಿದು ಸಾವನ್ನಪ್ಪಿರಬಹುದು ಎಂದು ವೈದ್ಯರು ಹೇಳಿದ್ದಾರೆಯ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಾಯುತ್ತಿರುವುದಾಗಿ ಶಾಲೆಯ ಸಮನ್ವಯಾಧಿಕಾರಿ ಆರ್. ಸಲೀಂ ಹೇಳಿದರು. ಈ ಪ್ರಕರಣದ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಗಂಗಮ್ಮನ ಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಯಾರನ್ನೂ ಕಸ್ಟಡಿಗೆ ತೆಗೆದುಕೊಂಡಿಲ್ಲ ಎಂದು ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


