ಫೋಟೋ ಕಳವು ಪ್ರಕರಣ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಬಂಧನ
ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪವಿದ್ದ ಮೇರೆಗೆ ಬಂಧಿಸಿದರು.
ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಸವರಾಜನ್ ರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂದಿಸಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆಯನ್ನು ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಫೋಟೊ ಕಳವಿಗೆ ಆರೋಪಿ ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿದೆ.
ಮತ್ತೊಬ್ಬ ಆರೋಪಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಅ.6ರಂದು ಕಳುವಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


