ಬಲಪಂಥೀಯ ಸಂಘಟನೆಗಳ ವಿರೋಧ, ವೀರ್ ದಾಸ್ ಕಾರ್ಯಕ್ರಮ ರದ್ದು; ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ
ಬಲಪಂಥೀಯ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮ ರದ್ದಾಗಿದ್ದು, ಈ ಸಂಬಂಧ ಕಲಾವಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು: ಬಲಪಂಥೀಯ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮ ರದ್ದಾಗಿದ್ದು, ಈ ಸಂಬಂಧ ಕಲಾವಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇಂದು ನಡೆಯಬೇಕಿದ್ದ ವೀರ್ ದಾಸ್ ಹಾಸ್ಯ ಕಾರ್ಯಕ್ರಮ ರದ್ದಾಗಿದೆ. ಇಂದು ಬೆಳಗ್ಗೆಯಿಂದ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸುತ್ತಿತ್ತು. ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಆಯೋಜಕರು ಹಾಸ್ಯ ಕಾರ್ಯಕ್ರಮ ರದ್ದು ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ನಗರದಲ್ಲಿ ವೀರ್ ದಾಸ್ ಅವರ ಎರಡು ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಭಾರೀ ವಿರೋಧ ಮತ್ತು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ವಿರೋಧ ಯಾಕೆ?
ಅಮೆರಿಕದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ವೀರ್ ದಾಸ್ ಹಾಸ್ಯ ಮಾಡಿ ಅವಹೇಳನ ಮಾಡಿದ್ದಾನೆ. ಈ ಕಾರಣಕ್ಕಾಗಿ ಮುಂಬೈ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ವಿದೇಶದಲ್ಲಿ ಭಾರತದ ಪ್ರಧಾನಿ ಮತ್ತು ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ ವ್ಯಕ್ತಿಯ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು ಎಂದು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.
ಅಲ್ಲದೆ ಈತ ಕೆಲವು ದಿನಗಳ ಹಿಂದೆ ಅಮೇರಿಕದ ವಾಷಿಗ್ಟನ್ ಡಿಸಿಯಲ್ಲಿ ಮಾತನಾಡಿದ ಒಂದು ವಿಡಿಯೋದಲ್ಲಿ ತಾನು ಮಹಿಳೆಯರನ್ನು ಬೆಳಗ್ಗೆ ಪೂಜೆ ಮಾಡಿ ರಾತ್ರಿ ಅವರ ಮೇಲೆ ಅತ್ಯಾಚಾರ ಮಾಡುವ ಭಾರತದಿಂದ ಬಂದಿದ್ದೇನೆ ಎಂದು ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಅಪಮಾನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದು ಭಾರತದ ದಂಡ ಸಂಹಿತೆಯ ಪ್ರಕಾರ ಗಂಭೀರ ಅಪರಾಧವಾಗಿದೆ. ಹೀಗಿರುವಾಗ ಇಂತಹ ವಿವಾದಿತ ವ್ಯಕ್ತಿ ಬೆಂಗಳೂರಿನಂತಹ ಅತ್ಯಂತ ಕೋಮು ಸೂಕ್ಚ್ಮ ಪ್ರದೇಶದಲ್ಲಿ ಈ ರೀತಿಯ ವಿವಾದಿತ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ.
ಈಗಾಗಲೇ ಕರ್ನಾಟಕದಲ್ಲಿ ಕೋಮು ಘಟನೆಗಳ ಪ್ರಕರಣದಿಂದ ಅನೇಕ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಎದುರಿಸುತ್ತಿರುವಾಗ ಪುನಃ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ದೂರು ನೀಡಿದ್ದವು.
ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ
ಜಸ್ಟ್ ಇನ್ ಕೇಸ್ ಎಂಬ ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಮುಖ್ಯಾಂಶಗಳಿಗೆ ನನ್ನ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ ಎಂದು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


