ರಾಜ್ಯ ಪೊಲೀಸರ ದಕ್ಷತೆ ಕೊಂಡಾಡಿದ ಗೃಹ ಸಚಿವ ಆರಗ ಜ್ಞಾನೇದ್ರ
ಕರ್ನಾಟಕ ಪೊಲೀಸರ ದಕ್ಷತೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕೊಂಡಾಡಿದ್ದಾರೆ.

ಮೈಸೂರು: ಕರ್ನಾಟಕ ಪೊಲೀಸರ ದಕ್ಷತೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕೊಂಡಾಡಿದ್ದಾರೆ.
ರೂ.16 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಪೊಲೀಸ್ ತರಬೇತಿ ಶಾಲೆ ಮತ್ತು ನೂತನ ಆಡಳಿತ ಕಟ್ಟಡವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ನಿನ್ನೆ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದ ಪೊಲೀಸ್ ಇಲಾಖೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಹರಿಯಾಣದಲ್ಲಿ ಎರಡನೇ ಉನ್ನತ ಮಟ್ಟದ ಅಧಿಕಾರಿಗಳ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.
“ಪೊಲೀಸರು ಒಂಬತ್ತು ನಿಮಿಷಗಳಲ್ಲಿ ಬರುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಪೊಲೀಸರು ಆನ್‌ಲೈನ್ ಎಫ್‌ಐಆರ್ ನೋಂದಣಿ ಮತ್ತು 112 ಸಹಾಯವಾಣಿಯನ್ನು ಪರಿಚಯಿಸಿದ್ದಾರೆ ಅದು ಶ್ಲಾಘನೀಯ. ರಾಜ್ಯ ಸರ್ಕಾರವೂ ಸೈಬರ್ ವಿಭಾಗವನ್ನು ಬಲಪಡಿಸುತ್ತಿದೆ ಎಂದು ಹೇಳಿದರು.
ಒಂದೇ ವರ್ಷದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಸುಮಾರು 117 ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಎಲ್ಲ ರೀತಿಯ ತರಬೇತಿ ನೀಡಲಾಗುತ್ತಿದೆ. ನಮಗೆ ಸವಾಲಿನ ಕೆಲಸ ಅಂದರೆ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಸೈಬರ್ ಕ್ರೈಮ್ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿಶೇಷ ತರಬೇತಿ ಪಡೆದುಕೊಳ್ಳಬೇಕು. ಕಾನ್‌ಸ್ಟೇಬಲ್‌ಗಳಿಗೆ ಎಲ್ಲವೂ ಸಾಧ್ಯ. ದೊಡ್ಡ ದೊಡ್ಡ ಪ್ರಕರಣದಲ್ಲಿ ಕಾನ್‌ಸ್ಟೇಬಲ್ ಪತ್ರ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.
ಹಿಂದೆ ಪೊಲೀಸ್ ಇಲಾಖೆಗೆ ಮಹಿಳೆಯರು ಸೇರುತ್ತಿರಲಿಲ್ಲ. ಆದರೆ, ಈಗ ಎಲ್ಲ ವಿಭಾಗದಲ್ಲಿ ಮಹಿಳಾ ಪೊಲೀಸ್ ಇದ್ದರೆ ಇದು ಸಂತಸ ತಂದಿದೆ ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರು ತರಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


