ಜನವರಿ 1 ರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆ: ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ.

ಬೆಂಗಳೂರು: ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.
ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಡಿಸೆಂಬರ್ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು. ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಸಮೀಪದ ಕಾಪುವಿನಲ್ಲಿ ಇತ್ತೀಚೆಗೆ ನಡೆದ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಘೋಷಿಸಿದರು.
ಕುಚಲಕ್ಕಿ ವಿತರಣೆಗೆ ಸಿಎಂ ಒಪ್ಪಿಗೆ ಪ್ರತಿ ಕ್ವಿಂಟಲ್ ಕುಚಲಕ್ಕಿಗೆ 2,540 ರೂಪಾಯಿ ನೀಡಲಾಗುವುದು. ಪಡಿತರದಲ್ಲಿ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದಾರೆ. ಈ ಮೂರೂ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬೇಕಿದೆ. ಇದಕ್ಕಾಗಿ 18 ಲಕ್ಷ ಕ್ವಿಂಟಾಲ್ ಭತ್ತ ಸಂಸ್ಕರಿಸಬೇಕಾಗಿದೆ. ಇದನ್ನು ಬೇರೆಡೆಯಿಂದ ಕೊಳ್ಳುವ ಬದಲು ಕರಾವಳಿ ಜಿಲ್ಲೆಗಳಲ್ಲಿಯೇ ಖರೀದಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಕುಚಲಕ್ಕಿ ಭತ್ತಕ್ಕೆ ಪ್ರೋತ್ಸಾಹ ಧನ ಕರಾವಳಿ ಜಿಲ್ಲೆಗಳಿಗೆ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿಯನ್ನು ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರವಾರದಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಕರಾಟೆ ಸಮವಸ್ತ್ರಗಳನ್ನು ಖರೀದಿಸಲು ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಸಚಿವರು ಹೇಳಿದರು. ಪ್ರಸ್ತುತ, ಅವರು ಈಗಾಗಲೇ 176 ಕೋಟಿ ರೂ ಪಾವತಿಸಿದ್ದಾರೆ ಮತ್ತು ಈ ವರ್ಷದಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ಕರಾಟೆ ತರಗತಿಗಳಿಗೆ ಬರುವುದರಿಂದ ಅವರಿಗೆ ಸಮವಸ್ತ್ರ ನೀಡಲು ಹೆಚ್ಚುವರಿ 18 ಕೋಟಿ ರೂ. ಹಣ ಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


