ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಗರ್ಭಿಣಿಗೆ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ.

ಬೆಂಗಳೂರು: ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ 25 ವಾರಗಳ ಭ್ರೂಣ ತೆಗೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ಶಾಲಾ ಪ್ರಮಾಣಪತ್ರ ಮತ್ತು ರೇಡಿಯಾಲಜಿಸ್ಟ್ ನೀಡಿದ ಸ್ಕ್ಯಾನ್ ವರದಿಯ ಪ್ರಕಾರ ಆಕೆ 25 ವಾರಗಳ ಗರ್ಭಿಣಿ ಎಂದು ಸಂತ್ರಸ್ತೆಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶವನ್ನು ನೀಡಿದರು.
ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ. ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ ಅಪ್ರಾಪ್ತೆ ಗರ್ಭಪಾತಕ್ಕೆ ಅನುಮತಿ ಕೋರಿ ತನ್ನ ತಾಯಿಯ ಮೂಲಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.
ಇದೇ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ನಿರ್ದೇಶನಗಳನ್ನು ಉಲ್ಲೇಖಿಸಿದ ಸರ್ಕಾರಿ ವಕೀಲರು, 1971 ರ ವೈದ್ಯಕೀಯ ಗರ್ಭಪಾತ ನಿಯಮಗಳ ಪ್ರಕಾರ ಕಾರ್ಯವಿಧಾನವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಲ್ಲಿಸಿದರು.
ಆಸ್ಪತ್ರೆಯ ವೈದ್ಯರು ಸಂತ್ರಸ್ತೆಯನ್ನು ಪರಿಶೀಲನೆಗೊಳಪಡಿಸಿ ಅವರ ಜೀವಕ್ಕೆ ಹಾನಿಯಾಗುವಂತಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು. ಒಂದು ವೇಳೆ ವೈದ್ಯರ ನಿರ್ಧಾರದಂತೆ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಭ್ರೂಣ ತೆಗೆಸಿದಲ್ಲಿ ತನಿಖೆಗೆ ನೆರವಾಗುವುದಕ್ಕಾಗಿ ಭ್ರೂಣದ ಡಿಎನ್ಎಯನ್ನು ವಿಧಿ ವಿಜ್ಞಾನ ಪ್ರಯೋಗದಲ್ಲಿ ಸಂಗ್ರಹಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಅಲ್ಲದೆ, ತನಿಖಾಧಿಕಾರಿಗಳು ತಕ್ಷಣ ಸಂತ್ರಸ್ತೆ ಮತ್ತು ಅವರೊಟ್ಟಿಗೆ ಇರುವವರಿಗೆ ನೆರವಾಗಲು ಆಸ್ಪತ್ರೆಗೆ ಹೋಗುವುದು ಮತ್ತು ಹಿಂದಿರುಗುವುದಕ್ಕಾಗಿ ವಾಹನದ ವ್ಯವಸ್ಥೆ ಮಾಡಬೇಕು. ವೈದ್ಯರ ಸೂಚನೆ ಮೇರೆಗೆ ಹೆಚ್ಚುವರಿ ಚಿಕಿತ್ಸೆಗೂ ಇದೇ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕು. ಯಾವುದೇ ಕಾರಣಕ್ಕೂ ಸಂತ್ರಸ್ತೆಯಿಂದ ಪಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


