ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ , ಕೇಸರಿ ಬಣ್ಣಕ್ಕೆ ವಿರೋಧವಿಲ್ಲ, ಆದರೆ ಸರ್ಕಾರದ ಆದ್ಯತೆಗೆ ವಿರೋಧವಿದೆ ಎಂದಿದ್ದಾರೆ. ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು, ಮೂಲಸೌಕರ್ಯದ ಕೊರತೆಯಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಒದಗಿಸದ ಸರ್ಕಾರ ಶಾಲೆಗಳ ಗೋಡೆಗಳಿಗೆ ಬಣ್ಣ ನೀಡಲು ಆದ್ಯತೆ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಕೇಸರಿ ಬಣ್ಣ ಮಾತ್ರ ಏಕೆ ಹಾಕಬೇಕು ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಸ್ವಾತಂತ್ರ್ಯ ಭಾರತದಲ್ಲಿ ರಾಷ್ಟ್ರೀಯವಾದಿ ಪಕ್ಷ ಎಂದು ನೀವೇ ಹೇಳಿಕೊಳ್ಳುವಂತೆ ಶಾಲೆಗಳ ಗೋಡೆಗಳಿಗೆ ತ್ರಿವರ್ಣ ಧ್ವಜದ ಬಣ್ಣ ಹಾಕಬೇಕು ಎಂದು ಅವರು ಒತ್ತಾಯಿಸಿದರು. ಆರ್ಕಿಟೆಕ್ಚರ್ ಸಲಹೆ ಪಡೆಯುವುದಾಗಿ ಹೇಳಿದ್ದೀರಿ. ಹಾಗಾದರೆ ಸರ್ಕಾರ ಮತ್ತು ಇಲಾಖೆಯನ್ನು ಅವರ ಸಲಹೆ ಮೇರೆಗೆ ನಡೆಸಲಾಗುತ್ತಿದೆಯೇ? ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


