ಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ
ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಮರಕ್ಕೆ ತಗಲುವ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿಕ್ಕಮಗಳೂರು: ರಾಜ್ಯದ ವಾಣಿಜ್ಯ ಬೆಳೆಯಾದ ಅಡಿಕೆ ಮರಕ್ಕೆ ತಗಲುವ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿದ್ದು, ಈಗಾಗಲೇ ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಗಳು ಎಲೆಚುಕ್ಕೆ ರೋಗ ಪರಿಹರಿಸಲು ಕಾರ್ಯೋನ್ಮುಖವಾಗಿವೆ. ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಎಲೆಚುಕ್ಕೆ ರೋಗದ ಮೂಲಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸಿ, ಚಿಕಿತ್ಸಾ ಮಾರ್ಗ ಕಂಡುಹಿಡಿದರೆ ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರುಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
ಸರ್ಕಾರ ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಿದೆ:
ಮಲೆನಾಡು ಹಾಗೂ ಬಯಲುಸೀಮೆಗಳಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳ ನಾಶಕ್ಕೆ ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಈಗಾಗಲೇ ದುಪ್ಪಟ್ಟು ಪರಿಹಾರ ನೀಡುತ್ತಿದೆ. ಈಗಾಗಲೇ 99 ಕೋಟಿ ರೂ.ಗಳಷ್ಟು ಬೆಳೆಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲಾಡಳಿತ ಬೆಳೆನಾಶಕ್ಕೆ ಜಂಟಿಸರ್ವೇ ಮಾಡಿ ವರದಿ ನೀಡಿದರೆ, ಅದಕ್ಕೂ ಸರ್ಕಾರ ಬೆಳೆಪರಿಹಾರ ನೀಡಲಿದೆ. ಈ ಹಿಂದೆ ಬೆಳೆನಾಶವಾಗಿ ಒಂದು ವರ್ಷವಾದ ನಂತರ ಪರಿಹಾರ ದೊರೆಯುತ್ತಿತ್ತು. ಆದರೆ ಈಗ ಸ್ಪಂದನಾಶೀಲ ಸರ್ಕಾರವಿರುವುದರಿಂದ ರೈತರ ರಕ್ಷಣೆ ಧಾವಿಸಲಾಗಿದ್ದು, ಒಂದೂವರೆ ತಿಂಗಳೊಳಗೆ ಬೆಳೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


